ತುಮಕೂರು: ಗುತ್ತಿಗೆದಾರರಿಗೆ ಅಧಿಕಾರಿಗಳು ಹಣ ಪಾವತಿಸಲು ಲಂಚಕ್ಕಾಗಿ ಬೇಡಿಕೆ ಇಟ್ಟು ಸತಾಯಿಸಿದರೆ ಮುಂದಿನ ದಿನಗಳಲ್ಲಿ ಲೋಕಾಯುಕ್ತರ ಮೊರೆ ಹೋಗಲಾಗುವುದು ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದಲ್ಲಿ ಇದುವರೆಗೂ 31,000 ಕೋಟಿ ರೂ ಗುತ್ತಿಗೆದಾರರಿಗೆ ನೀಡಬೇಕಾಗಿದ್ದು ಅದು ಬಾಕಿ ಉಳಿದಿದೆ. ಬಿಲ್ ಪಾವತಿ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಇತ್ತೀಚಿಗೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಇಲಾಖೆಗೆ ದೂರು ನೀಡಿದ್ದರು ಈ ಸಂಬಂಧ ಮೂವರು ಮೂವರು ಇಂಜಿನಿಯರ್ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರೂ ಎಂದು ಹೇಳಿದರು.
ಎಲ್ ಒಸಿ ಕೊಡುವಾಗ ತಾರತಮ್ಯ ಮಾಡುತ್ತಿದ್ದು 5 ಕೋಟಿ ರೂ ಬಿಡುಗಡೆಯಾದರೆ 5 ಕೋಟಿ ರೂ ಸೀನಿಯಾ ರೀತಿ ಮಾಡುತ್ತಾರೆ ಉಳಿದಿರುವ ಹಣ ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ವ್ಯವಹಾರ ಮಾಡುತ್ತಾರೆ ಎಂದು ದೂರಿದರು.
ಕೇಂದ್ರ ಸರ್ಕಾರದ ರೀತಿಯಲ್ಲಿ 1:1 ಅನುಪಾತದಲ್ಲಿ ರಾಜ್ಯ ಸರ್ಕಾರ ಟೆಂಡರ್ ಕರೆಯಬೇಕು ನಗರೊತ್ತಾನ, ಜೆಜೆ ಎಂ ಮತ್ತು ಅಟಲ್ ಬೂಜ್ ಯೋಜನೆ ಅದರಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು.
ಜಿ ಎಸ್ ಟಿ ಬಗ್ಗೆ ಗುತ್ತಿಗೆದಾರರಿಗೆ ಇರುವ ವ್ಯತ್ಯಾಸವನ್ನು ಸರಿಪಡಿಸಬೇಕು ಪ್ಯಾಕೇಜ್ ಪದ್ದತಿ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q