ಬೆಂಗಳೂರು: ಖಾತೆ ಮಾಡಿ ಕೊಡೋದಕ್ಕಾಗಿ ಲಂಚ ಸ್ವೀಕರಿಸುವ ವೇಳೆಯಲ್ಲಿಯೇ, ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ ಮಾಡಿ ಕೊಡೋದಕ್ಕಾಗಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆಯಲ್ಲಿ ತಹಶೀಲ್ದಾರ್ ವರ್ಷಾ ಎಂಬ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಹಶೀಲ್ದಾರ್ ವರ್ಷಾ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಸಿ ಕೊಡೋ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇಂದು 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿಯೇ ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


