ಬಾಗಲಕೋಟೆ: ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಮುದಕಪ್ಪ ತೇಜಿ ಲೋಕಾಯುಕ್ತ ಬಲೆಗೆ ಬಿದ್ದವರು.
ಎನ್ ಎ ಫ್ಲ್ಯಾಟ್ ಎಂಟ್ರಿ ಮಾಡಿಕೊಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೊನ್ನಾಕಟ್ಟೆಯ ವಾಸು ಜಾಧವ್ ಎಂಬುವವರಿಂದ ಹಣ ಪಡೆಯುತ್ತಿದ್ದಾಗ ಇಬ್ಬರು ಪಿಡಿಒಗಳು ಸಿಕ್ಕಿ ಬಿದ್ದಿದ್ದಾರೆ.
ಬಾಗಲಕೋಟೆ ಲೋಕಾಯುಕ್ತ ಡಿವೈ ಎಸ್ ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz