ಮೈಸೂರು: ಲೋಕಾಯುಕ್ತ ಇರುತ್ತಿದ್ದರೆ, ಸಿದ್ದರಾಮಯ್ಯ ಜೈಲಿಗೆ ಹೋಗುತ್ತಿದ್ದರು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಹೆಚ್.ವಿಶ್ವನಾಥ್ ಹೇಳಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಅವರು ಹರಿಹಾಯ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅನುಭವಿಗಳು. ಸದನದಲ್ಲಿ ಮಾತನಾಡುವುದನ್ನು ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದು ಸಮಂಜಸವಲ್ಲ.40% ಕಮಿಷನ್ ಬಗ್ಗೆ ತನಿಖೆಯಾಗಬೇಕು ಅನ್ನೋದನ್ನು ಸದನದ ಒಳಗೆ ಕೇಳಬೇಕು. ಅದಕ್ಕೆ ಪೂರಕ ಸಾಕ್ಷಿ ದಾಖಲೆಯೊಂದಿಗೆ ಕೇಳಬೇಕು. ನೀವು ಮಾತ್ರ ಸತ್ಯವಂತರು ಬಿಜೆಪಿ ಪರ್ಸೆಂಟೇಜ್ ಎಂದು ಅವರು ಹೇಳುತ್ತಾರೆ. ನಾನು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವುದಿಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತೇನೆ ಎಂದರು.
ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕೆ ಶಿವಕುಮಾರ್ ರಿಂದ 7 ಸಾವಿರ ಕೋಟಿ ಸೋಲಾರ್ ಟೆಂಡರ್ ಕೇವಲ 3 ನಿಮಿಷದಲ್ಲಿ ಮುಗಿಸಿದ್ದರು. ಸತ್ಯವಂತ ಸಿದ್ದರಾಮಯ್ಯ ಲೋಕಾಯುಕ್ತ ಏಕೆ ಸ್ಕ್ಯ್ರಾಪ್ ಮಾಡಿದಿರಿ.? ಲೋಕಾಯುಕ್ತ ಬಿ. ಎಸ್. ಯಡಿಯೂರಪ್ಪ ಅವರನ್ನು ಸಿಎಂ ಆಗಿದ್ದಾಗಲೇ ಜೈಲಿಗೆ ಹಾಕಿತ್ತು. ಅರ್ಕಾವತಿ ರೀ ಡೂ ಹೊಸ ಹೆಸರು ನೀಡಿದಿರಿ. ಲ್ಯಾಂಡ್ ಡೀ ನೋಟಿಫಿಕೇಶನ್ ಗೆ ಹೊಸ ಹೆಸರು. 40% ಜೊತೆಗೆ ರೀ ಡೂ ಸಹ ತನಿಖೆಯಾಗಲಿ. ಆಗ ಯಾರು ಸತ್ಯವಂತರು ಅಂತಾ ಗೊತ್ತಾಗುತ್ತದೆ ಎಂದು ಹೆಚ್ ವಿಶ್ವನಾಥ್ ತರಾಟೆಗೆತ್ತಿಕೊಂಡರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700