nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದಲ್ಲೇ ಅತೀ ಉದ್ದದ ಸುರಂಗ: ಅರುಣಾಚಲ ಪ್ರದೇಶದಲ್ಲಿರುವ ಸೆಲಾ ಸುರಂಗ
    ರಾಜ್ಯ ಸುದ್ದಿ March 10, 2024

    ವಿಶ್ವದಲ್ಲೇ ಅತೀ ಉದ್ದದ ಸುರಂಗ: ಅರುಣಾಚಲ ಪ್ರದೇಶದಲ್ಲಿರುವ ಸೆಲಾ ಸುರಂಗ

    By adminMarch 10, 2024No Comments2 Mins Read
    tunnel

    ಜಗತ್ತಿನಲ್ಲೇ ಅತಿ ಉದ್ದದ ಅವಳಿ ಸುರಂಗ ಎಂಬ ಖ್ಯಾತಿಗೂ ಭಾಜನವಾದ ಸೆಲಾ ಸುರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.

    ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್‌ ಜಿಲ್ಲೆಯಲ್ಲಿ, 13,700 ಅಡಿ ಎತ್ತರದಲ್ಲಿ ನಿರ್ಮಿಸಿರುವ ಸಂಪರ್ಕ, ಸಾಗಣೆ ಸೇರಿ ವ್ಯೂಹಾತ್ಮಕವಾಗಿಯೂ ಈ ಸುರಂಗವು ಅತ್ಯಂತ ಪ್ರಾಮುಖ್ಯತೆ ಪಡೆದ ಸುರಗವೆಂದೇ ಹೇಳಲಾಗಿದೆ.


    Provided by
    Provided by

    ಸುರಂಗಕ್ಕೆ ಬರೋಬ್ಬರಿ 825 ಕೋಟಿ ರೂ. ವ್ಯಯವಾಗಿದ್ದು, ಕೇಂದ್ರ ಸರ್ಕಾರದ ಗಡಿ ರಸ್ತೆ ಸಂಘಟನೆಯು (BRO) ಈ ಸುರಂಗ ನಿರ್ಮಿಸಿದೆ. ಸೆಲಾ ಸುರಂಗ ಯೋಜನೆ ಅಡಿಯಲ್ಲಿ ಎರಡು ಸುರಂಗಗಳನ್ನು ನಿರ್ಮಿಸಲಾಗಿದ್ದು, ಒಂದು ಸುರಂಗವು 980 ಮೀಟರ್‌ ಉದ್ದವಾಗಿದ್ದು, ಮತ್ತೊಂದು ಸುರಂಗವು 1,550 ಮೀಟರ್‌ ಉದ್ದ ಇದೆ. ಇದು ತೇಜ್‌ಪುರದಿಂದ ತವಾಂಗ್‌ ಗೆ ಸಂಪರ್ಕ ಕಲ್ಪಿಸಲಿದೆ. ಎರಡೂ ಸುರಂಗಗಳ ನಡುವೆ 1,200 ಮೀಟರ್‌ ಉದ್ದದ ಲಿಂಕ್‌ ರೋಡ್‌ ಕೂಡ ಇದೆ ಎನ್ನುವುದು ಗಮನಾರ್ಹ.

    ಅರುಣಾಚಲ ಪ್ರದೇಶದಲ್ಲಿ ಗಡಿ ತಂಟೆ ಮಾಡುವ ಚೀನಾಗೆ ಸೆಲಾ ಸುರಂಗವು ವ್ಯೂಹಾತ್ಮಕವಾಗಿ ಪ್ರಮುಖವಾಗಿದೆ. ಅದರಲ್ಲೂ, ತಮ್ಮ ದೇಶದ ಪುರಾತನ ಪ್ರದೇಶ ಎಂಬುದಾಗಿ ಕ್ಯಾತೆ ತೆಗೆಯುವ ತವಾಂಗ್‌ ಪ್ರದೇಶದಲ್ಲಿ ಈ ಸುರಂಗವು ಸಂಪರ್ಕ ಕಲ್ಪಿಸಲಿದೆ. ತವಾಂಗ್‌ ಪ್ರದೇಶದಲ್ಲಿ ಭಾರತೀಯ ಸೇನೆಯು ಹೆಚ್ಚು ನಿಗಾ ಇರಿಸಲು ಸಾಧ್ಯವಾಗಲಿದೆ. ಇನ್ನು, ವಾಸ್ತವ ಗಡಿ ನಿಯಂತ್ರಣ ರೇಖೆ ಬಳಿ ಹೆಚ್ಚಿನ ಸಂಖ್ಯೆ ಸೈನಿಕರನ್ನು ಕ್ಷಿಪ್ರವಾಗಿ ನಿಯೋಜಿಸಲು, ಶಸ್ತ್ರಾಸ್ತ್ರಗಳನ್ನು ಸಾಗಿಸಲು ಕೂಡ ಅನುಕೂಲವಾಗಲಿದೆ.

    ಅರುಣಾಚಲ ಪ್ರದೇಶದಲ್ಲಿ ಚಳಿಗಾಲದಲ್ಲಿ ಭಾರಿ ಪ್ರಮಾಣದ ಹಿಮಪಾತದಿಂದ ಹತ್ತಾರು ಮಾರ್ಗಗಳಲ್ಲಿ ಸಂಚಾರ ಸ್ಥಗಿತವಾಗುತ್ತದೆ. ಆದರೆ, ಸೆಲಾ ಸುರಂಗವು ಎಲ್ಲ ಹವಾಮಾನ, ಅದರಲ್ಲೂ ಚಳಿಗಾಲದಲ್ಲಿ ಕೂಡ ಮುಕ್ತ ಸಂಚಾರಕ್ಕೆ ಅನುಕೂಲವಾಗಲಿದೆ. ಚಳಿಗಾಲದಲ್ಲಿ ಗಡಿಯಲ್ಲಿ ಯಾವುದೇ ತುರ್ತು ಸಂದರ್ಭ ಎದುರಾದರೆ, ಸೇನೆಯು ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಲು ಸುರಂಗವು ಅನುಕೂಲ ಕಲ್ಪಿಸಲಿದೆ. ತೇಜ್‌ ಪುರದಿಂದ ತವಾಂಗ್‌ ಗೆ ತೆರಳಲು ಸುರಂಗದಿಂದ ಒಂದು ಗಂಟೆ ಸಮಯ ಉಳಿಯಲಿದೆ.

    ಸುರಂಗಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “2019ರಲ್ಲಿ ಸೆಲಾ ಸುರಂಗಕ್ಕೆ ಚಾಲನೆ ನೀಡಲಾಗಿತ್ತು. ಈಗ ಸುರಂಗದ ಕಾಮಗಾರಿ ಪೂರ್ಣಗೊಂಡಿದ್ದು, ಸಂಪರ್ಕ ಸಾಧನೆಗೆ ಪ್ರಮುಖ ಸಾಧನವಾಗಲಿದೆ. ಇದು ಮೋದಿಯ ಗ್ಯಾರಂಟಿಯಾಗಿದೆ” ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಗುಬ್ಬಿ: ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವಾದಿ ಶಿವಶರಣರ ವತಿಯಿಂದ ಮೇ 25ರಂದು ಪಟ್ಟಣದಲ್ಲಿ ಬಸವ ಜಯಂತಿ ಆಯೋಜನೆ…

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026

    ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.