ತುಮಕೂರು: ಶಕ್ತಿ ಕೇಂದ್ರದ ಕೂಗಳತೆ ದೂರದಲ್ಲೇ ಇರುವ ಶಾಲೆಯ ದುಸ್ಥಿತಿ ಇದು. ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇರುವ ಸರ್ಕಾರಿ ಶಾಲೆಯೊಂದಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ್ದು, ಅಲ್ಲಿನ ಶಾಲೆಯ ದುಸ್ಥಿತಿ ಕಂಡು ಮರುಗಿದ್ದಾರೆ.
ಶತಮಾನಕ್ಕೂ ಹೆಚ್ಚು ಪುರಾತನ ಕಾಲದ ಶಾಲೆ ಇದಾಗಿದ್ದು, ಇಷ್ಟೊಂದು ಅದ್ವಾನದ ಪರಿಸ್ಥಿತಿಯಲ್ಲಿ ಮಕ್ಕಳು ಅದು ಹೇಗೆ ಕಳಿಯುತ್ತಾರೆ ದೇವರೇ ಬಲ್ಲ ಎಂದು ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ 1,300ಕ್ಕೂ ಹೆಚ್ಚು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದ ಈ ಶಾಲೆ ಈಗ 48 ಮಕ್ಕಳು ಇರುವುದು ಶಾಲೆಯ ಅವಾಸಾನದ ದ್ಯೋತಕ. ಶಕ್ತಿ ಕೇಂದ್ರದ ಕೂಗಳತೆ ದೂರದಲ್ಲೇ ಇರುವ ಈ ಶಾಲೆಯ ದುಸ್ಥಿತಿ ಜಿಲ್ಲಾಡಳಿತದ ಕಣ್ಣಿಗೆ ಬಿದ್ದಿಲ್ಲದಿರುವುದು ವಿಷಾದನೀಯ. ಸ್ಥಳಕ್ಕೆ ಆಗಮಿಸಿದ ಬಿಇಓ ರವರಿಂದ ಈ ಬಗ್ಗೆ ವಿವರಣೆ ಪಡೆದುಕೊಂಡಿರುವುದಾಗಿ ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296