ತುಮಕೂರು: ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಚಾಲಕ ಮೃತಪಟ್ಟ ದಾರುಣ ಘಟನೆ ತುಮಕೂರಿನ ಹೊರವಲಯದ ಗೂಳೂರಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಹೆಬ್ಬೂರು ಹೋಬಳಿಯ ಕಾಳಿಂಗಯ್ಯನ ಪಾಳ್ಯದ ಯೋಗೀಶ್(34) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದ್ದು, ಇವರು ತುಮಕೂರಿನ ವಿಪ್ರೋ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಮಾರ್ನಿಂಗ್ ಶಿಫ್ಟ್ ನಲ್ಲಿ ಕೆಲಸ ಮಾಡಲು ಯೋಗೀಶ್ ಅವರು ಎಂದಿನಂತೆಯೇ ಹೊರಟಿದ್ದರು. ಈ ವೇಳೆ ಗೂಳೂರಿನಲ್ಲಿ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣಾ ಪಿಎಸ್ ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA