ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.
ಲಾರಿ ಚಾಲಕ ಶೇಖರ್ ಹಾಗೂ ಟ್ರಕ್‌ನ ಚಾಲಕ ಉತ್ತರ ಪ್ರದೇಶ ಅಲಿಗಡ ಜಲ್ಲೆಯ ಉದಲ ಇಲಿಯಾಸ್ ಪುರದ ನಿವಾಸಿ ಜುಬುರುದ್ದೀನ್ (52) ಮತ್ತು ಕ್ಲಿನರ್ ಮಹಮ್ಮದ್ ಖೈಫ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಇಂದು ಬೆಳಿಗ್ಗೆ 5.30ರ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಬೆಂಗಳೂರಿನಿಂದ ಮುಂಬೈಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಿಂದಾಗಿ ಎರಡೂ ವಾಹನಗಳೂ ಜಖಂಗೊಂಡಿದ್ದು, ರಸ್ತೆ ಯಲ್ಲಿ ಕಲ್ಲಂಗಡಿ ಹಣ್ಣು ಬಿದ್ದು ಹರಡಿಕೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4