ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಣೆ ಧಾವಿಸಿದ್ದು, ಬಂದ ಅಗ್ನಿಶಾಮಕ ಸಿಬ್ಬಂದಿ ಎರಡು ಕ್ರೇನ್ ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್ಗಳನ್ನು ಬಿಡಿ ಬಿಡಿ ಮಾಡಿ, ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.
ಬೆಳಗಾವಿ ನಗರ ಹೊರವಲಯದ ಕೆಎಲ್ಇ ಆಸ್ಪತ್ರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4