ಗುಬ್ಬಿ: ಲಾರಿಯೊಂದಕ್ಕೆ ಮತ್ತೊಂದು ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಬ್ರಿಡ್ಜ್ ಬಳಿ ಬೆಳಿಗ್ಗೆ ಮುಂದೆ ಸಾಗುತ್ತಿದ್ದ ಲಾರಿಗೆ ಕೋಳಿ ಸಾಗಾಟದ ಲಾರಿ ವೇಗವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಪರಿಣಾಮವಾಗಿ ಲಾರಿಯಲ್ಲಿದ್ದ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತದ ತೀವ್ರತೆಗೆ ಲಾರಿ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದು, ಲಾರಿಯ ಹಾರನ್ ಮೊಳಗುತ್ತಲೇ ಇದ್ದ ದೃಶ್ಯ ಕಂಡು ಬಂದಿದೆ. ಲಾರಿಯ ಸಿಗ್ನಲ್ ಕೂಡ ಆನ್ ನಲ್ಲಿರುವುದು ಪತ್ತೆಯಾಗಿದ್ದು, ಭೀಕರತೆಯಿಂದ ಕೂಡಿದೆ.
ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5