ಬೀದರ್: ಆನ್ ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾಲ್ಕಿ ತಾಲ್ಲೂಕಿನ ಮೆಹಕರ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಡಿ.ಫಾರ್ಮ್ ಪದವೀಧರನಾದ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಆನ್ ಲೈನ್ ಗೇಮ್ಸ್ ಚಟಕ್ಕೆ ಬಿದ್ದು ಸುಮಾರು 1.5ಲಕ್ಷ ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದ ಯುವಕ ಬುಧವಾರ ಸಂಜೆ ಸಾಯಗಾಂವ ಗ್ರಾಮ ಸಮೀಪದ ಜ್ಯೋತಿ ತಾಂಡಾ ಬಳಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸ್ಥಳೀಯರು ಕೂಡಲೇ ಯುವಕನನ್ನು ಭಾಲ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಅಲ್ಲಿಂದ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx