ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ.ರಾವ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯನ್ನು ಮೈಸೂರಿನ ಟಿ ನರಸೀಪುರ ಎಂಬಲ್ಲಿ ವಶಕ್ಕೆ ಪಡೆದ ಪೊಲೀಸರು ಪುತ್ತೂರಿಗೆ ಕರೆದುಕೊಂಡು ಬಂದಿದ್ದಾರೆ.
ಪುತ್ತೂರಿನ ಪ್ರಭಾವಿ ಮುಖಂಡ, ನಗರಸಭಾ ಸದಸ್ಯ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ಎಫ್ ಐಆರ್ ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ. ಆತನನ್ನು ವಶಕ್ಕೆ ಪಡೆಯಲು ಕಳೆದ ಕೆಲವು ದಿನಗಳಿಂದ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಮಗ ಕೃಷ್ಣ ಜೆ.ರಾವ್ ಹೈಸ್ಕೂಲ್ ನಿಂದಲೇ ಪರಿಚಿತರು. ಸದ್ಯ ಎಂಜಿನಿಯರಿಂಗ್ ಓದುತ್ತಿರುವ ಆರೋಪಿ ಕೃಷ್ಣ ಜೆ ರಾವ್ ಮದುವೆಯಾಗುವುದಾಗಿ ಭರವಸೆ ನೀಡಿ ಸಂತ್ರಸ್ತೆಯ ಜೊತೆ ದೈಹಿಕ ಸಂಪರ್ಕ ನಡೆಸಿದ್ದು, ಯುವತಿ ಗರ್ಭಿಣಿಯಾದ ನಂತರ ಮದುವೆಗೆ ನಿರಾಕರಿಸಿದ್ದು, ತಲೆಮರೆಸಿಕೊಂಡಿದ್ದ.
ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC