ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಅಂಕೋಲಕ್ಕೆ ಇಬ್ಬರೂ ಬಾಡಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಾಗೇಂದ್ರ ಕಾರಿನಲ್ಲಿದ್ದ ಯುವತಿಯ ತಲೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಆ ಬಳಿಕ ಮೊದಲೇ ಪ್ಲಾನ್ ಮಾಡಿ ತಂದಿದ್ದ ಸ್ಫೋಟಕವನ್ನು ಅನ್ನು ಕಾರಿನೊಳಗೆ ಸಿಡಿಸಿಕೊಂಡಿದ್ದಾನೆ.
ಸ್ಫೋಟಕ ಸಿಡಿದ ತಕ್ಷಣ ಕಾರಿಗೆ ಭೀಕರವಾಗಿ ಬೆಂಕಿ ಹೊತ್ತಿಕೊಂಡಿದ್ದು, ನಾಗೇಂದ್ರ ಕಾರಿನೊಳಗೇ ಸಜೀವ ದಹನವಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ತುಮಕೂರು ಎಸ್ ಪಿ ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




