ನವದೆಹಲಿ: LPG ಸಿಲಿಂಡರ್‌ಗಳು ಭಾರವಾಗಿರುವುದರಿಂದ ಮತ್ತು ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುವುದರಿಂದ, ಸರ್ಕಾರವು ಶೀಘ್ರದಲ್ಲೇ ಅವುಗಳ ತೂಕವನ್ನು ಕಡಿಮೆ ಮಾಡಬಹುದು. ಅದರಲ್ಲೂ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಮೇಲೆತ್ತಲು ಮತ್ತು ಸಾಗಿಸಲು ತೊಂದರೆಯಾಗುತ್ತಿದೆ. ಸಿಲಿಂಡರ್ ತೂಕ ಕಡಿಮೆಯಾದರೆ ಜನಸಾಮಾನ್ಯರು ಕೊಂಡೊಯ್ಯುವುದು ಸುಲಭ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಸಿಂಗ್ ಕಲಾಪದಲ್ಲಿ ತಿಳಿಸಿದರು.
ಜನರ ಅನುಕೂಲಕ್ಕಾಗಿ ಗ್ಯಾಸ್ ಸಿಲಿಂಡರ್ ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಕೆಲವೊಮ್ಮೆ ಸಮಸ್ಯೆಯಾಗುತ್ತದೆ. ಆದಕ್ಕಾಗಿ ಶೀಘ್ರದಲ್ಲೇ ಸರ್ಕಾರ ಎಲ್ ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದರು.
14.2 ಕೆಜಿ ಗೃಹಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೂಕವು ಅದರ ಸಾಗಣೆಯಲ್ಲಿ ಸಮಸ್ಯೆಗೆ ಕಾರಣವಾಗುತ್ತದೆ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ತನ್ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದಕ್ಕೂ ಮುನ್ನ ಸಂಸದರೊಬ್ಬರು ಭಾರೀ ಸಿಲಿಂಡರ್ ಗಳಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದರು.
ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಹರ್ದೀಪ್ ಸಿಂಗ್ ಪುರಿ, ‘ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್ ಗಳ ಭಾರವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ ಮತ್ತು ಅದರ ತೂಕವನ್ನು ಕಡಿಮೆ ಮಾಡಲು ಚಿಂತಿಸಲಾಗುತ್ತಿದೆ ಎಂದು ಹೇಳಿದರು.
ವರದಿ: ಆಂಟೋನಿ ಬೇಗೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700