ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್ ಪಿಜಿ ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಜರುಗಿದೆ. 23 ವರ್ಷದ ಕಾರ್ಮಿಕ ತೋಸಿಫ್ ಖಾನ್ ಮೃತ ವ್ಯಕ್ತಿ ಎನ್ನಲಾಗಿದೆ.
ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


