ನಟ ಪುನೀತ್ ರಾಜ್‌ಕುಮಾರ್ ಅಭಿನಯಿಸಿರುವ ‘ಲಕ್ಕಿ ಮ್ಯಾನ್’ ಸಿನಿಮಾ ಸೆ.9ರಂದು ಬಿಡುಗಡೆಯಾಗುತ್ತಿದೆ. ‘ಈ ಅವಕಾಶವನ್ನು ಯಾರೂ ಮಿಸ್ ಮಾಡಿಕೊಳ್ಳಬೇಡಿ’ ಎಂದು ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ. ‘ಸಿನಿಮಾ ರಿಲೀಸ್ ಆದಾಗ ಪ್ರತಿಯೊಬ್ಬರು ಎರಡೂ ಕೈಗಳನ್ನು ಬಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಇದು ಸಿಗಲ್ಲ. ಚಿತ್ರದಲ್ಲಿ ಅಪ್ಪು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಅದು. ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತದೆ’ ಎಂದಿದ್ದಾರೆ.
ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಆಗಿತ್ತು. ನಾವೆಲ್ಲರೂ ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್ ನೋಡುವಾಗ ನಾನು ಸ್ಮೈಲ್ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ಲಕ್ಕಿ ಮ್ಯಾನ್’ ಸಿನಿಮಾದ ಒಂದು ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್ ರಾಜ್‌ಕುಮಾರ್ ಅವರು ಒಟ್ಟಿಗೆ ಡ್ಯಾನ್ಸ್ ಮಾಡಿದ್ದಾರೆ. ಅದನ್ನು ದೊಡ್ಡ ಪರದೆಯಲ್ಲಿ ನೋಡುವುದೇ ಒಂದು ಹಬ್ಬ. ಅದಕ್ಕಾಗಿ ಅಭಿಮಾನಿಗಳೆಲ್ಲ ಕಾದಿದ್ದಾರೆ.
ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್‌ಕುಮಾರ್, ರಾಕ್ಲೈನ್ ವೆಂಕಟೇಶ್, ಭಾ.ಮಾ. ಹರೀಶ್, ಸುಂದರ್ ರಾಜ್ ಮುಂತಾದವರು ಕೂಡ ಆಗಮಿಸಿದ್ದರು. ಸಹೋದರನ ಚಿತ್ರಕ್ಕೆ ರಾಘಣ್ಣ ಮನಸಾರೆ ಹರಸಿದರು. ಯುವ ರಾಜ್‌ಕುಮಾರ್ ಹಾಗೂ ವಿನಯ್ ರಾಜ್‌ಕುಮಾರ್ ಕೂಡ ಅಪ್ಪು ಬಗ್ಗೆ ಮಾತನಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz