ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ರಜತ್ ನನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಬಸವೇಶ್ವರನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಜತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ರಜತ್ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಇಂದು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW