ಬೆಂಗಳೂರು: ಮಡೆನೂರು ಮನು ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 31 ತಿಂಗಳ ಚಾಟಿಂಗ್ ಡಿಟೈಲ್ಸ್ ಪಡೆದುಕೊಂಡಿದ್ದಾರೆ.
ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದರು. ಪ್ರಕರಣ ಸಂಬಂಧ ಆರೋಪಿ ಮಡೆನೂರು ಮನುವನ್ನು ಪೊಲೀಸರು ಕಸ್ಟಡಿಗೆ ಪಡೆದು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ನಟನ 2 ಮೊಬೈಲ್ ಹಾಗೂ ಸಂತ್ರಸ್ತೆಯ 2 ಫೋನ್ ವಶಕ್ಕೆ ಪಡೆದು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ.
ಸಂತ್ರಸ್ತೆ ಹಾಗೂ ನಟನ ನಡುವಿನ ಆಡಿಯೋ, ವೀಡಿಯೋ ಸಂಭಾಷಣೆಯಲ್ಲಿ ಹಲವು ನಟ, ನಟಿಯರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸರು ಹೆಚ್ಚಿನ ತನಿಖೆಗೆ ಸಿದ್ಧತೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW