ಮಧುಗಿರಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೃತಪಟ್ಟಿರುವ ದಾರುಣ ಘಟನೆ ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿಯಲ್ಲಿ ನಡೆದಿದೆ.
ಕವಾಡಿಗರ ಪಾಳ್ಯ ನಿವಾಸಿ, ಚಿಕ್ಕವಜ್ರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೀರಭದ್ರಯ್ಯ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಮಂಗಳವಾರ ಕವಾಡಿಗರ ಪಾಳ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ವೀರಭದ್ರಯ್ಯನವರಿಗೆ ಡಿಕ್ಕಿ ಹೊಡೆದಿದೆ..
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಗುರುವಾರ ಅವರು ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿತ ವಾಹನದ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC