ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲು ಮಧುಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಯನ್ನು ಏಪ್ರಿಲ್ 5ರಂದು ನಡೆಯುವ ಡಾ.ಬಾಬು ಜಗಜೀವನರಾಂ ಹಾಗೂ ಏಪ್ರಿಲ್ 14ರಂದು ನಡೆಯುವ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯಂದು ನೀಡಲಾಗುವುದು.
ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 27ರೊಳಗಾಗಿ ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ(ಗ್ರೇಡ್-1) ದಿನೇಶ್ ಬಿ.ಎಂ. ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4