nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ”ಮಧುಗಿರಿ ಬಂದ್”ಗೆ ಕರೆ
    ಮಧುಗಿರಿ October 18, 2022

    ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ”ಮಧುಗಿರಿ ಬಂದ್”ಗೆ ಕರೆ

    By adminOctober 18, 2022No Comments2 Mins Read
    madhugiri bandh

    ಮಧುಗಿರಿ: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗುತ್ತಿದ್ದು, ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಭಾರೀ ಅನಾನುಕೂಲವಾಗುತ್ತಿದೆ. ಸಂತೆ ಮೈದಾನದಲ್ಲಿ ನೀರು ನಿಲ್ಲುವುದರಿಂದ ಮಹಿಳೆಯರು ವ್ಯಾಪಾರದ ವೇಳೆ ಜಾರಿ ಬಿದ್ದಿರುವುದು, ಬೀದಿದೀಪ ನಿರ್ವಹಣೆ ನಿರ್ಲಕ್ಷ್ಯ, ರಾಜೀವ್ ಗಾಂಧಿ ಕ್ರೀಡಾಂಗಣ ಕೆಸರುಗದ್ದೆಯಾಗಿರುವುದರಿಂದ ವಾಯುವಿಹಾರಿಗಳಿಗೆ ಮತ್ತು ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ದೂರಿದೆ.

    ಈ ಸಂಬಂಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಅಕ್ಟೋಬರ್–21ರಂದು ”ಮಧುಗಿರಿ ಬಂದ್” ಕರೆ ನೀಡಲಾಗುತ್ತಿದೆಂದು ಸೋಮವಾರ  ಪಟ್ಟಣದಲ್ಲಿ  ಪದಾಧಿಕಾರಿಗಳು ದ್ವಿಚಕ್ರವಾಹನದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ  ಸಲ್ಲಿಸಿದರು.

    ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕಳೆದ ಹದಿನೈದು ದಿನಗಳಿಂದ ದಸರಾ ರಜೆ ಇದ್ದ ಹಿನ್ನೆಲೆಯಿಂದಾಗಿ ಶಾಲಾ ಕಾಲೇಜುಗಳು ರಜೆ ಇದ್ದವು, ಸೋಮವಾರದಿಂದ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು ಮಕ್ಕಳನ್ನು ಪೋಷಕರು ಶಾಲೆಗೆ ಬಿಡಲು ದ್ವಿಚಕ್ರ ವಾಹನಗಳು ಮತ್ತು ಆಟೋಗಳ ಮೂಲಕ ಬರುತ್ತಾರೆ. ಆದರೆ ಮಧುಗಿರಿ ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ವಾಹನ  ಸಂಚಾರಕ್ಕೆ ಅಸ್ತವ್ಯಸ್ತವಾಗುತ್ತಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಗುಂಡಿಗಳನ್ನು ಮುಚ್ಚದಿದ್ದಲ್ಲಿ ಶುಕ್ರವಾರದಂದು ಮಧುಗಿರಿ ಬಂದ್ ಗೆ ಕರೆ ನೀಡಲಾಗಿದೆ ಎಂದರು.

    ಮಧುಗಿರಿ ಪಟ್ಟಣದ ಗುರು ಭವನದ ರಸ್ತೆ, ನೃಪತುಂಗಾ ವೃತ್ತ, ಕೃಷಿ ಇಲಾಖೆ ರಸ್ತೆ, ಡಬಲ್ ರೋಡ್, ಪಟ್ಟಣದ ಹಲವು ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಜತೆಗೆ ಯುಜಿಡಿ ನೀರು ಸಹ ಜಿನುಗುತ್ತಿರುವುದರಿಂದ ಅವಲಕ್ಕಿ ಮಿಲ್ ಮುಂಭಾಗ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

    ಇನ್ನು ರಾಜರಾಜೇಶ್ವರಿ ಚಿತ್ರಮಂದಿರದ ಮುಂಭಾಗ  ಶ್ರೀದಂಡಿನ ಮಾರಮ್ಮನ ದೇವಾಲಯದ ಮುಂಭಾಗ  ಕೋರ್ಟ್ ಮುಂಭಾಗದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು ಇತ್ತೀಚೆಗೆ ಅಪಘಾತಗಳಾಗಿ  ಕುಟುಂಬಗಳೇ ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳು ಸಂಭವಿಸಿವೆ ಎಂದರು.

    ಇನ್ನೂ ಪ್ರತಿ ಬುಧವಾರ ನಡೆಯುವ ಸಂತೆ ಮೈದಾನದಲ್ಲಿ ಮಣ್ಣು ತುಂಬಿರುವುದರಿಂದ ಜೊತೆಯಲ್ಲಿ ಅಳವಡಿಸಿರುವ ಹೈಮಾಸ್ಟ್ ದೀಪ ಇಲ್ಲಿವರೆಗೂ ಉರಿಯದ ಕಾರಣ ವ್ಯಾಪಾರ ಮಾಡುವ ಮಹಿಳೆಯರು ಜಾರಿ ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸತತವಾಗಿ ನೀರು ಜಿನುಗುತ್ತಿದ್ದು ಕ್ರೀಡಾಪಟುಗಳು ನಿರಾಸೆಯಿಂದ ಪ್ರತಿನಿತ್ಯ ಹಿಂದಿರುಗುತ್ತಿದ್ದಾರೆ. ವಾಯು ವಿಹಾರಿಗಳಂತೂ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

    ಈ ಮೇಲಿನ ಎಲ್ಲಾ ಕಾರಣಗಳಿಂದಾಗಿ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಸ್ಥಳೀಯ ಜನಪ್ರತಿನಿಧಿಗಳಂತು ಕ್ಯಾರೆ ಅನ್ನದ ಕಾರಣ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಅಕ್ಟೋಬರ್-21 ರ ಶುಕ್ರವಾರದಂದು ಮಧುಗಿರಿ ಬಂದ್ಗೆ ಕರೆ ನೀಡಲಾಗುತ್ತಿದೆ. ಅ ದಿನ ಮಿನಿವಿಧಾನ ಸೌಧದಲ್ಲಿರುವ ಶಾಸಕರ ಕೊಠಡಿಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದರು.

    ಈ ಬಂದ್ ಗೆ ಆಟೋ ಚಾಲಕರು, ಹೋಟೆಲ್, ಮಾಲೀಕರು ಬಸ್ ಮಾಲೀಕರು, ಶಾಲಾ ಕಾಲೇಜು ಆಡಳಿತ ಮಂಡಳಿಯವರು, ಸಾರ್ವಜನಿಕರು ಹೆಚ್ಚಿನ ಬೆಂಬಲ ನೀಡಲಿದ್ದಾರೆಂದು ಭಾವಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಬಂದ್ ಕರೆ ನೀಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ  ಮನವಿ ಮಾಡಿಕೊಂಡಿದ್ದಾರೆ.

    ಮನವಿ ಸ್ವೀಕರಿಸಿ  ಉಪವಿಭಾಗಾಧಿಕಾರಿ ಸೋಮಪ್ಪಕಡಕೋಳ ಮಾತನಾಡಿ, ನಾವು ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೇವೆ. ನೀವು ನೀಡಿರುವ ಪತ್ರವನ್ನು ಸಂಬಂಧಪಟ್ಟ ಇಲಾಖೆಯವರಿಗೆ ಕಳುಹಿಸಲಾಗುವುದೆಂದು ತಿಳಿಸಿದರು.

    ಮುಖ್ಯಾಧಿಕಾರಿ ಪುರಸಭೆ ಮಧುಗಿರಿ, ತಹಸೀಲ್ದಾರ್ ಮಧುಗಿರಿ ತಾಲ್ಲೂಕು  .ಜಿಲ್ಲಾಧಿಕಾರಿಗಳು  ತುಮಕೂರು,ಅಧ್ಯಕ್ಷರು ಕಾರ್ಯದರ್ಶಿ ಕಾನೂನು ಸೇವಾ ಪ್ರಾಧಿಕಾರ ಮಧುಗಿರಿ ರವರುಗಳಿಗೂ ಮನವಿ ಸಲ್ಲಿಸಿದ್ದಾರೆ.

    ಉಪಾಧ್ಯಕ್ಷ ಎಸ್’ಟಿಡಿ ರಘು,  ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ  ಪಾಂಡುರಂಗಯ್ಯ, ಆಟೋ  ಚಾಲಕರ ಘಟಕದ ಅಧ್ಯಕ್ಷ  ಗೌಡ, ಹರೀಶ್, ಹೊಯ್ಸಳ ಟ್ಯಾಕ್ಸಿ ಚಾಲಕರ ಸಂಘದ ಯೋಗೀಶ್ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ರೋಹಿತ್, ಸಿಕಂದರ್, ಪ್ರದೀಪ್, ರಾಕೇಶ್, ಸುರೇಶ್,  ರಾಜ್ ಕುಮಾರ್,  ಲಕ್ಷ್ಮೀಶ, ಮಹೇಶ್, ಶಿವಲಿಂಗಯ್ಯ, ಸಂತೋಷ, ನರೇಶ್ ಬಾಬು ಇದ್ದರು.

    ವರದಿ: ಅಬಿದ್, ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಔರಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ಇದರಲ್ಲಿ ತೊಡಗಿರುವವರ…

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.