nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಸರ್ಕಾರಿ ಕಾಲೇಜಿಗೆ  +ve  ನ್ಯಾಕ್ ಮಾನ್ಯತೆಯ ಗರಿ
    ಮಧುಗಿರಿ November 3, 2022

    ಮಧುಗಿರಿ ಸರ್ಕಾರಿ ಕಾಲೇಜಿಗೆ  +ve  ನ್ಯಾಕ್ ಮಾನ್ಯತೆಯ ಗರಿ

    By adminNovember 3, 2022No Comments2 Mins Read
    madhugiri

    ಮಧುಗಿರಿ: ಕಳೆದ ಐದು ವರ್ಷಗಳಲ್ಲಿ ಕಾಲೇಜಿನಲ್ಲಿ ನಡೆದ ಚಟುವಟಿಕೆಗಳನ್ನಾಧರಿಸಿ ನ್ಯಾಕ್ ಮಾನ್ಯತೆಯನ್ನು ನವೀಕರಿಸಲು ನ್ಯಾಕ್ ಮಾನ್ಯತಾ ತಂಡ ಕಾಲೇಜಿಗೆ ಭೇಟಿ ನೀಡಿ, ಶಿಕ್ಷಣಕ್ಕೆ ಪೂರಕವಾದ ಎಲ್ಲ ಅಂಶಗಳು, ಸೌಲಭ್ಯಗಳನ್ನು ಪರಿಶೀಲಿಸಿದ್ದು, ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2.94 ಅಂಕಗಳಿಸಿ “ಬಿ ಪ್ಲಸ್ ಪ್ಲಸ್” (++) ಶ್ರೇಣಿಯನ್ನು ನೀಡಿದ್ದು, ಈ ಶ್ರೇಣಿ ಪಡೆದ ಜಿಲ್ಲೆಯ ಮತ್ತು ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಏಕೈಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಾಗಿದೆ ಎಂದು ಪ್ರಾಂಶುಪಾಲರಾದ ಪ್ರೊ.ಡಿ.ಎಸ್.ಮುನೀಂದ್ರಕುಮಾರ್ ತಿಳಿಸಿದ್ದಾರೆ. 

    ನ್ಯಾಕ್ ಮಾನ್ಯತೆಯ ಪ್ರಮಾಣ ಪತ್ರ ಮತ್ತು ಗ್ರೇಡ್ ಪ್ರಮಾಣಪತ್ರವನ್ನು ಸ್ವೀಕರಿಸಿದ ಪ್ರಯುಕ್ತ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಧ್ಯಾಪಕರನ್ನುದ್ದೇಶಿಸಿ ಮಾತನಾಡಿ, ನ್ಯಾಕ್ ಪೀರ್ ಟೀಮ್ ಅಕ್ಟೋಬರ್ 28 ಮತ್ತು 29 ರಂದು ಭೇಟಿ ನೀಡಿತ್ತು. ಆನ್ಲೈನ್ ಮೂಲಕ ಸಲ್ಲಿಕೆಯಾದ ದಾಖಲೆಗಳನ್ನು ಪರಿಶೀಲಿಸಿ, ಶಾಸಕರು ಮತ್ತು ಕಾಲೇಜು ಅಭಿವೃದ್ದಿ ಸಮಿತಿ ಸಭೆ ನಡೆಸಿ, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಕಛೇರಿಯ ಎಲ್ಲ ವಿವರಗಳನ್ನು ಪರಿಶೀಲಿಸಿ ಪ್ರಗತಿಯನ್ನು ದಾಖಲಿಸಿ ಉನ್ನತ ಶ್ರೇಣಿಯನ್ನು ನೀಡಿದ್ದು, ನ್ಯಾಕ್ ಮೌಲ್ಯಮಾಪನವು ಕಠಿಣವಾಗಿದ್ದು, ಇದರಲ್ಲಿ ಉತ್ತಮ ಶ್ರೇಣಿ ಪಡೆಯಲು ಅಧ್ಯಾಪಕರು, ವಿದ್ಯಾರ್ಥಿಗಳು, ಶಾಸಕರು, ಕಾಲೇಜು ಅಭಿವೃದ್ದಿ ಸಮಿತಿಯ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ. ನ್ಯಾಕ್ ಮಾನ್ಯತೆ ಪರಿಶೀಲನೆ ತಂಡದಲ್ಲಿ ಪ್ರೊ.ಮಣಿಮಾಲ ದಾಸ್, ವಿಶ್ರಾಂತ ಕುಲಪತಿಗಳು, ಪಶ್ಚಿಮ ಬಂಗಾಳ, ಕೊಲ್ಲಾಪುರ ವಿಶ್ವವಿದ್ಯಾನಿಲದಿಂದ ಪ್ರೊ.ಜಗನ್ ಕರಾಡೆ  ಮತ್ತು ಚೆನ್ನೈನ  ಕ್ವೀನ್ಸ್ ಮೇರಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ. ಆರ್. ಅಕ್ತರ್ ಬೇಗಂ ರವರ ತಂಡ ಪರಿಶೀಲನೆ ನಡೆಸಿದ್ದರು ಎಂದರು.


    Provided by
    Provided by

    ನ್ಯಾಕ್ ಸಂಚಾಲಕರಾದ ಡಾ.ಅಶೋಕ್ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕಾಲೇಜು ವಿವಿಧ ರಂಗಗಳಲ್ಲಿ ಅಭಿವೃದ್ದಿಯನ್ನು ಸಾಧಿಸಿದ್ದು, ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸ್ಪಂದಿಸಿದೆ. ವಿವಿಧ ವಿಷಯಗಳಲ್ಲಿ ಹೆಚ್ಚುವರಿ ಕೋರ್ಸ್‍ಗಳನ್ನು ನಡೆಸಿದ್ದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪರಿಹಾರಾತ್ಮಕ ಬೋಧನಾ ತರಗತಿಗಳನ್ನು ನಡೆಸಲಾಗಿತ್ತು. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕಮ್ಮಟಗಳನ್ನು ನಡೆಸಲಾಗಿತ್ತು. ಸ್ನಾತಕೋತ್ತರ ತರಗತಿಗಳನ್ನು ಪ್ರಾರಂಭಿಸಲಾಗಿದೆ. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಕಾಲೇಜು ಆವರಣದಲ್ಲಿ ಗಿಡಮರಗಳನ್ನು ನೆಟ್ಟು ಪೋಷಿಸಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಸೃಷ್ಟಿ ಮಾಡಿದ್ದು, ಈ ಎಲ್ಲ ಅಂಶಗಳನ್ನು ಮಾನದಂಡವನ್ನಾಗಿ ಪರಿಗಣಿಸಿದ ನ್ಯಾಕ್ ಸಮಿತಿ ಉತ್ತಮ ಅಂಕ ನೀಡಿದ್ದು ಸಂತಸ ತಂದಿದೆ ಎಂದರು.  

    ಐ.ಟಿ.ಸಂಚಾಲಕರಾದ ಡಾ.ಗಿರಿಜ ಡಿ.ಕೆ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕಾಲೇಜಿನಲ್ಲಿ ಕಲಿಕಾ ವಾತಾವರಣ ಇಮ್ಮಡಿಗೊಂಡಿದ್ದು, ವಿವಿಧ ಸಂಘ ಸಂಸ್ಥೆಗಳು, ಖಾಸಗಿ ಸಂಸ್ಥೆಗಳೊಂದಿಗೆ ಶೈಕ್ಷಣಿಕ ಒಡಂಬಡಿಕೆಗಳನ್ನು ಮಾಡಿಕೊಂಡು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತವರಣವನ್ನು ಸೃಷ್ಟಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯವಾಯಿತು. ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು, ರಾಂಕ್  ವಿಜೇತರಾಗಿರುತ್ತಾರೆ. ನುರಿತ ಅಧ್ಯಾಪಕ ವರ್ಗ, ಉತ್ತಮ ಗ್ರಂಥಾಲಯ, ಪ್ರಯೋಗಾಲಯಗಳು ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಖಾಸಗಿ ಕಾಲೇಜುಗಳಿಗೆ ಸೆಡ್ಡು ಹೊಡೆದು, ಗುಣಮಟ್ಟದ ಫಲಿತಾಂಶ ಪಡೆಯಲು ಸಾಧ್ಯವಾಯಿತು ಎಂದರು.

    ಸಾಂಸ್ಕೃತಿಕ ಸಂಚಾಲಕರಾದ ಕೆ.ದಿವಾಕರ್ ಕಾರ್ಯಕ್ರಮ ನಿರೂಪಿಸಿದರು. ಕೆ.ಟಿ.ಸ್ವಾಮಿ ಸ್ವಾಗತಿಸಿ, ಡಾ.ವಿಜಯಲಕ್ಷ್ಮಿ ಎನ್. ವಂದಿಸಿದರು.

    ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಮಾನ್ಯತಾ ಪ್ರಮಾಣ ಪತ್ರವನ್ನು ಅಧ್ಯಾಪಕರೊಂದಿಗೆ ಪ್ರಾಂಶುಪಾಲರಾದ ಪ್ರೊ.ಡಿ.ಎಸ್.ಮುನೀಂದ್ರಕುಮಾರ್ ಪ್ರದರ್ಶಿಸಿದರು.

    ವರದಿ: ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.