ಮಧುಗಿರಿ: ಸಂಪೂರ್ಣ ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನ.29 ಮತ್ತು ನ.30 ರಂದು ಶಿಬಿರವನ್ನು ಕೊರಟಗೆರೆ ತಾಲೂಕಿನ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಶೈಲ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಬಿ.ಆರ್.ಭಾಸ್ಕರ್ ಪ್ರಸಾದ್ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಸಮುದಾಯದ ವಿಚಾರವಂತರು, ಹೋರಾಟಗಾರರು, ಕಾನೂನು ಪಂಡಿತರು ಮತ್ತು ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ಕ್ರಾಂತಿಕಾರಿ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಟಿ.ಹೆಚ್.ಮೈಲಾರಪ್ಪತಿಪ್ಪಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


