ಮಧುಗಿರಿ: ತಾಲೂಕಿನ ಪುರವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ಯುವ ಕ್ರೀಡಾ ಸಂಘದ ವತಿಯಿಂದ ಈರಣ್ಣ ನಾಯಕ ಕಪ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಗ್ರಾಮೀಣ ಯುವಕರಲ್ಲಿ ಕ್ರೀಡಾಸ್ಪೂರ್ತಿ ಬೆಳೆಸುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಟೋರ್ನಮೆಂಟ್ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಪಂದ್ಯಾವಳಿ ಮಾ. 7 ಮತ್ತು ಮಾ.8 ರಂದು ಎರಡು ದಿನಗಳ ಕಾಲ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಅಮೆಚೂರ್ ಕಬಡ್ಡಿ ತಂಡಗಳು ಭಾಗವಹಿಸಲಿವೆ. ರೋಚಕ ಪೈಪೋಟಿಗೆ ವೇದಿಕೆ ಸಿದ್ದವಾಗಿದ್ದು, ಕ್ರೀಡಾಭಿಮಾನಿಗಳಿಗೆ ಮನರಂಜನೆಯೊಂದಿಗೆ ಉತ್ಸಾಹಭರಿತ ಪಂದ್ಯಗಳು ಕಾದಿವೆ.
ಪ್ರತಿ ತಂಡಕ್ಕೆ ಪ್ರವೇಶ ಶುಲ್ಕ 1,001 ನಿಗದಿಪಡಿಸಲಾಗಿದೆ. ಕ್ರೀಡಾಪಟುಗಳು ಹಾಗೂ ಪ್ರೇಕ್ಷಕರಿಗೆ ಊಟದ ವ್ಯವಸ್ಥೆ ಇರಲಿದೆ. ಅಂಪೈರ್ ಗಳ ತೀರ್ಮಾನವೇ ಅಂತಿಮವಾಗಿರುತ್ತದೆ ಹಾಗೂ ಉತ್ತಮ ಕ್ರೀಡಾಸ್ಪೂರ್ತಿ ಮತ್ತು ಶಿಸ್ತಿನ ಆಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು.
ಎಲ್ಲಾ ತಂಡಗಳು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಟೋರ್ನಮೆಂಟ್ ಯಶಸ್ವಿಗೊಳಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುರಳಿಮೋಹನ್ (99802 24183) ಹಾಗೂ ಅಜಯ್ಕುಮಾರ್ (72594 10313) ಅವರನ್ನು ಸಂಪರ್ಕಿಸಬಹುದಾಗಿದೆ.
ಆಕರ್ಷಣೀಯ ಬಹುಮಾನ:
ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವಾಗಿ 33,333 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನವಾಗಿ 22,222 ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನವಾಗಿ 11,111 ನಗದು ಹಾಗೂ ಟ್ರೋಫಿ ಹಾಗೂ ಚತುರ್ಥ ಬಹುಮಾನವಾಗಿ 6,666 ನಗದು ಹಾಗೂ ಟ್ರೋಫಿ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


