ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿಯಿಂದ ಮಧುಗಿರಿ ಕಡೆಗೆ ಬರುತ್ತಿದ್ದ ಲಾರಿಯನ್ನು ಮಿಡಿಗೇಶಿ ಹೋಬಳಿಯ ಆಂಧ್ರ ಗಡಿ ಭಾಗದ ಚಂದ್ರಬಾವಿ ಚೆಕ್‌ಪೋಸ್ಟ್ ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿದರು. ಈ ವೇಳೆ ಯಾವುದೇ ಅಧಿಕೃತ ದಾಖಲೆ ಅಥವಾ ಅನುಮತಿಯಿಲ್ಲದೆ ಅಕ್ರಮವಾಗಿ 27 ಜಾನುವಾರುಗಳನ್ನು (ಎಮ್ಮೆ, ಕೋಣ, ಹೋರಿ ಮತ್ತು ಹಸುಗಳು) ಸಾಗಿಸುತ್ತಿರುವುದು ಪತ್ತೆಯಾಗಿದೆ.
ಕಾರ್ಯಾಚರಣೆ ನಡೆಸಿದ ಮಿಡಿಗೇಶಿ ಪೊಲೀಸರು ಲಾರಿ ಚಾಲಕ ಚೇತನ್, ಕ್ಲೀನರ್ ರಘು ಮತ್ತು ತಬರೀಸ್ ಎಂಬುವವರನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ ಬಂಧಿತರು ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಭಾಗಗಳಿಂದ ಜಾನುವಾರುಗಳನ್ನು ತರುತ್ತಿರುವುದಾಗಿ ತಿಳಿಸಿದ್ದಾರೆ.
ವಶಪಡಿಸಿಕೊಂಡ ಜಾನುವಾರುಗಳನ್ನು ಸುರಕ್ಷಿತವಾಗಿ ಕ್ಯಾತ್ಸಂದ್ರದ ಗೋಶಾಲೆಗೆ ರವಾನಿಸಲಾಗಿದೆ ಎಂದು ಪಿಎಸ್‌ಐ ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


