ತುಮಕೂರು: ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ನಂಬರ್ ಲಿಂಕ್ ಮಾಡಿಸಿ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ http://swdservices.karnataka.gov.in/PrizeMoneyClientApp/ ಮೂಲಕ ಡಿಸೆಂಬರ್ 31ರೊಳಗಾಗಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ 15 ದಿನದೊಳಗಾಗಿ ಅರ್ಜಿಯ ಹಾರ್ಡ್ ಪ್ರತಿ ಹಾಗೂ ಇತರೆ ದಾಖಲಾತಿಗಳನ್ನು ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಅರ್ಜಿಯ ಹಾರ್ಡ್ ಪ್ರತಿಯನ್ನು ಕಚೇರಿಗೆ ಸಲ್ಲಿಸದೇ ಇದ್ದಲ್ಲಿ ಅರ್ಜಿಗಳು ಲಾಗಿನ್ ನಿಂದ ತಿರಸ್ಕೃತವಾಗುತ್ತದೆ ಎಂದು ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4