ಮಧುಗಿರಿ: ಮಧುಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ಡಿಸೆಂಬರ್ 24ರಂದು ಕನ್ನಡ ಭವನದಲ್ಲಿ ಆಯೋಜಿಸಲಾಗಿರುವ 7ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಕವಿ ಹಾಗೂ ವಿಮರ್ಶಕ ಕೆ.ಪಿ. ನಟರಾಜು ಅವರು ಆಯ್ಕೆಯಾಗಿದ್ದಾರೆ.
ಕೆ.ಪಿ. ನಟರಾಜು ಅವರ ಪರಿಚಯ:
ಶಿಕ್ಷಣ: ತಾಂತ್ರಿಕ ಶಿಕ್ಷಣದ ಹಿನ್ನೆಲೆ ಹೊಂದಿದ್ದರೂ, ಕನ್ನಡ ಸಾಹಿತ್ಯದ ಮೇಲಿನ ಆಸಕ್ತಿಯಿಂದ ಕನ್ನಡದಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ರಾಷ್ಟ್ರಕವಿ ಕುವೆಂಪು ಅವರ ಚಿಂತನೆಗಳ ಕುರಿತು ಪ್ರೌಢ ಪ್ರಬಂಧ ಮಂಡಿಸಿ ಡಿ.ಲಿಟ್ ಪದವಿ ಪಡೆದಿದ್ದಾರೆ.
ಸಾಹಿತ್ಯ ಕೃಷಿ: ಇವರು ಸಾಹಿತ್ಯ ಕ್ಷೇತ್ರದಲ್ಲಿ ದಶಕಗಳಿಂದ ಸಕ್ರಿಯರಾಗಿದ್ದು, ಅನೇಕ ಕವನ ಸಂಕಲನ ಹಾಗೂ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ.
ಪ್ರಶಸ್ತಿ–ಗೌರವಗಳು: ಇವರ ‘ನಿತ್ಯವೂ ನಿನ್ನೊಡನೆ’ ಕವನ ಸಂಕಲನಕ್ಕೆ 2018ರ ಸಾಲಿನ ಪ್ರತಿಷ್ಠಿತ ‘ಕಡೆಂಗೋಡ್ಲು ಶಂಕರಭಟ್ ಕಾವ್ಯ ಪ್ರಶಸ್ತಿ’ ಲಭಿಸಿದೆ. ಅಲ್ಲದೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಇವರು ಭಾಜನರಾಗಿದ್ದಾರೆ.
ಡಿಸೆಂಬರ್ 24ರಂದು ನಡೆಯಲಿರುವ ಈ ಸಾಹಿತ್ಯ ಹಬ್ಬಕ್ಕೆ ತಾಲ್ಲೂಕಿನ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾಹಿತ್ಯ ಪರಿಷತ್ ವಿನಂತಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


