ಮಧುಗಿರಿ: ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಸ್ಧಳೀಯ ವ್ಯಕ್ತಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ನೀಡುವಂತೆ ಕುಮಾರಸ್ವಾಮಿ ಅವರಿಗೆ ಮಧುಗಿರಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯ ಪೂರ್ವದಿಂದ ಮಧುಗಿರಿ ತಾಲ್ಲೂಕಿನ ಸ್ಥಳೀಯರಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದ್ದು ಅಷ್ಟೇ . ಉಳಿದಂತೆ ಯಾವುದೇ ರಾಜಕೀಯ ಪಕ್ಷಗಳಿಂದ ಸ್ಥಳಿಯ ವ್ಯಕ್ತಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿಲ್ಲ. ಮಧುಗಿರಿ ತಾಲ್ಲೂಕಿನ ಯಾವುದೇ ಅಭಿವೃದ್ಧಿ ಕೆಲಸಗಳು ನೇಡೆಯದೆ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷದಿಂದ ಸ್ಥಳೀಯ ವ್ಯಕ್ತಿಗೆ ಕುಮಾರಸ್ವಾಮಿ ಅವರು ಅವಕಾಶ ಮಾಡಿಕೊಡಬೇಕು ಎಂದು ಸುಮಾರು ಒಂದು ಸಾವಿರಕ್ಕೂ ಹೆಚ್ಚಿನ ಸಾರ್ವಜನಿಕರು ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಮಧುಗಿರಿ ಕ್ಷೇತ್ರದಿಂದ ಸ್ಥಳೀಯ ವ್ಯಕ್ತಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ನೀಡಿದರೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶತಾಯಗತಾಯ ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5