ಹೆಚ್.ಡಿ.ಕೋಟೆ /ಸರಗೂರು: ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರ ತೆರವುಗೊಳಿಸಿ ಅವಮಾನಿಸಿರುವುದನ್ನು ಖಂಡಿಸಿ ಹೆಚ್.ಡಿ.ಕೋಟೆಯ ಹ್ಯಾಂಡ್ ಪೋಸ್ಟ್ ಸರ್ಕಲ್ ನಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ತಾಲ್ಲೂಕಿನ ಪಟ್ಟಣದ ಮೈಸೂರು, ಸರಗೂರು ಮಾನದವಾಡಿ, ಕೋಟೆಯ ರಸ್ತೆಯಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು, ಈ ವೇಳೆ, ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಸಂಶೋಧಕ ಸಂಘದ ಅಧ್ಯಕ್ಷರಾದ ಮರಿದೇವಯ್ಯ, ಮಲ್ಲಿಕಾರ್ಜುನ ಗೌಡ ಅವರನ್ನು ತಕ್ಷಣವೇ ವಜಾಗೊಳಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು. ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಲು ಸಾಧ್ಯವಾಗದಿದ್ದಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಒತ್ತಾಯಿಸಿದರು.
ಪ್ರಗತಿಪರ ಸಂಘಟನೆಯ ಪ್ರತಿಭಟನಾಕಾರರು ಮಾತನಾಡಿದ್ದರು. ಜಿವಿಕಾ ಬಸವರಾಜು. ಹೆಗ್ಗನೂರು ನಿಂಗರಾಜು.ಜಿವಿಕಾ ಉಮೇಶ್, ಹೆಚ್.ಡಿ.ಕೋಟೆ ಪುರಸಭೆಯ ಸದಸ್ಯರಾದ ಪ್ರೇಮ್ ಸಾಗರ್, ಜೀವಿಕ ಉಮೇಶ್, ಜೀವಿಕ ಬಸವರಾಜ್, ಸೌಮ್ಯ ಮಂಜುನಾಥ್, ಹೆಗ್ಗನೂರು ನಿಂಗರಾಜು, ಸುರೇಶ್, ಬೀರಂಬಳ್ಳಿ ದಿಲೀಪ, ಅಭಿಷೇಕ್, ಕೋಹಳ ಶಿವು ಮೊದಲಾದವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB