ವರನ ಮನೆಯಿಂದ ಮದುವೆ ದಿಬ್ಬಣ ಹೊರಡುವ ಕೆಲವೇ ಕ್ಷಣಗಳ ಮುನ್ನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ರಾಜಸ್ಥಾನ್ ನಲ್ಲಿ ಶುಕ್ರವಾರ ಸಂಭವಿಸಿದೆ.
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತಿಥಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾಗ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿತು. ಇದರಿಂದ ಕನಿಷ್ಠ 50 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಜೋಧ್ ಪುರದಿಂದ 60 ಕಿ.ಮೀ. ದೂರದ ಭುಂಗ್ರಾ ಗ್ರಾಮದಲ್ಲಿ ಗ್ಯಾಸ್ ಸೋರಿಕೆಯಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರಲ್ಲಿ ಕೆಲವರಿಗೆ ಶೇ.80ರಿಂದ 100ರಷ್ಟು ಸುಟ್ಟ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಕುಸಿದಿದೆ. ಘಟನೆಯಲ್ಲಿ 12 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy