ಮದ್ಯದ ಅಮಲಿನಲ್ಲಿ ಇಂಡಿಗೋ ಉದ್ಯೋಗಿಯೊಂದಿಗೆ ಅನುಚಿತವಾಗಿ ವರ್ತಿಸಿದ ಸ್ವೀಡನ್ ಪ್ರಜೆಯನ್ನು ಬಂಧಿಸಲಾಗಿದೆ. 63 ವರ್ಷದ ಎರಿಕ್ ಹೆರಾಲ್ಡ್ ಜೊನಾಸ್ ವೆಸ್ಟ್‌ಬರ್ಗ್ ಅವರನ್ನು ಬಂಧಿಸಲಾಗಿದೆ.
ಭಾನುವಾರ ಬ್ಯಾಂಕಾಕ್‌ನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆರೋಪಿಗೆ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿತ್ತು.
ಪ್ರಯಾಣದ ವೇಳೆ ಉದ್ಯೋಗಿ ಊಟ ಬಡಿಸುತ್ತಿದ್ದಾಗ ಅವರು ಅನುಚಿತವಾಗಿ ವರ್ತಿಸಿದ್ದಾರೆ. ಸಿಬ್ಬಂದಿ ತಕ್ಷಣ ಕ್ಯಾಪ್ಟನ್‌ಗೆ ಮಾಹಿತಿ ತಿಳಿಸಿದ್ದಾರೆ.
ಇದಾದ ಬಳಿಕ ಅಧಿಕಾರಿಗಳು ಎಚ್ಚರಿಕೆ ನೀಡಿದರೂ ಆರೋಪಿ ಮತ್ತೆ ನೌಕರನ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಆಹಾರವನ್ನು ಆರ್ಡರ್ ಮಾಡಿದ ನಂತರ, ಎಟಿಎಂ ಕಾರ್ಡ್ ಅನ್ನು ಪಿಒಎಸ್ ಯಂತ್ರದ ಮೂಲಕ ಪಾವತಿಸಲು ಕೇಳಲಾಯಿತು.
ಸ್ವೈಪ್ ಮಾಡುವಂತೆ ನಟಿಸಿ ಕೈ ಹಿಡಿದರು ಎಂದು ನೌಕರನ ಹೇಳಿಕೆ. ನಂತರ ಪಿನ್ ನಂಬರ್ ಬರೆದುಕೊಡುವಂತೆ ಕೇಳಿದಾಗ ಇತರ ಪ್ರಯಾಣಿಕರ ಮುಂದೆ ತುಂಬಾ ಕೆಟ್ಟದಾಗಿ ನಡೆದುಕೊಂಡಿದ್ದಾಗಿ ಉದ್ಯೋಗಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA