ಛತ್ತೀಸ್‌ಗಢ ವಿಧಾನಸಭೆಯು ಪತ್ರಕರ್ತರ ರಕ್ಷಣೆ ಮಸೂದೆಯನ್ನು ಅಂಗೀಕರಿಸಿದೆ. ಮುಖ್ಯಮಂತ್ರಿ ಭೂಪೇಶ್ ಬಾಗಲ್ ಅವರು ಮಸೂದೆಯನ್ನು ಮಂಡಿಸಿದರು. ಮಾಧ್ಯಮ ಕಾರ್ಯಕರ್ತರ ರಕ್ಷಣೆ ಮತ್ತು ಹಿಂಸಾಚಾರವನ್ನು ತಡೆಯಲು ಮಸೂದೆಯಾಗಿದೆ ಎಂದು ಭೂಪೇಶ್ ಭಾಗಲ್ ಸ್ಪಷ್ಟಪಡಿಸಿದ್ದಾರೆ.
ಸದನದಲ್ಲಿ ವಿರೋಧ ಪಕ್ಷದ ನೇತೃತ್ವ ವಹಿಸಿರುವ ಬಿಜೆಪಿ, ಮಸೂದೆಯನ್ನು ಆಯ್ಕೆ ಸಮಿತಿಗೆ ಒಪ್ಪಿಸಬೇಕೆಂದು ಒತ್ತಾಯಿಸಿತ್ತು. ಆದರೆ ಈ ಬೇಡಿಕೆ ಕುಂಟುತ್ತಾ ಸಾಗಿತ್ತು. 2018ರಲ್ಲಿ ಕಾಂಗ್ರೆಸ್ ಪ್ರಣಾಳಿಕೆಯು ಪತ್ರಕರ್ತರ ರಕ್ಷಣೆಗೆ ಮಸೂದೆಯನ್ನು ತರುವುದಾಗಿ ಭರವಸೆ ನೀಡಿತ್ತು. ಪತ್ರಕರ್ತರ ಮೇಲಿನ ದಾಳಿಯನ್ನು ತಡೆಯುವುದು ಮತ್ತು ಮಾಧ್ಯಮ ಸಂಸ್ಥೆಗಳ ಆಸ್ತಿಗಳ ರಕ್ಷಣೆಯನ್ನು ಖಚಿತಪಡಿಸುವುದು ಈ ಮಸೂದೆಯ ಗುರಿಯಾಗಿದೆ.
ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಮೇಲೆ ಹಲ್ಲೆ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಮಸೂದೆಯನ್ನು ತರಲಾಗಿದೆ ಎಂದು ಭೂಪೇಶ್ ಬಾಗಲ್ ಹೇಳಿದ್ದಾರೆ.
ಅಂತಹ ಶಾಸನಕ್ಕಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಫ್ತಾಬ್ ಆಲಂ ನೇತೃತ್ವದಲ್ಲಿ 2019 ರಲ್ಲಿ ಸಮಿತಿಯನ್ನು ರಚಿಸಲಾಯಿತು.
ವಿವಿಧ ರಾಜಕೀಯ ಪಕ್ಷಗಳ ಅಭಿಪ್ರಾಯ ಮತ್ತು ಸಲಹೆಗಳನ್ನೂ ಪರಿಗಣಿಸಿ ಮಸೂದೆಯನ್ನು ಸಿದ್ಧಪಡಿಸಲಾಗಿದೆ. ಇದೊಂದು ಐತಿಹಾಸಿಕ ಕ್ಷಣವಾಗಿದ್ದು ಇದನ್ನು ಸುವರ್ಣಾಕ್ಷರಗಳಲ್ಲಿ ಬರೆಯಬೇಕು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


