ಬೆಂಗಳೂರು: ರಾಜ್ಯದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯ ನೀಡಲಾಗುವುದು ಎಂದು ಕೃಷಿ ಸಚಿವ ಹೇಳಿದ್ದಾರೆ.
ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ ತರಳಬಾಳು ಶಾಖಾಮಠದಲ್ಲಿ ಆಯೋಜಿಸಿದ್ದ ಶಿವ ಸಂಚಾರ ನಾಟಕೋತ್ಸವ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳ ಬಿಸಿಯೂಟಕ್ಕೆ ಸಿರಿಧಾನ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದರು.
2023ಕ್ಕೆ ಅಂತಾರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮೇಳ ಏರ್ಪಡಿಸಲಾಗುವುದು ಎಂದು ತಿಳಿಸಿದ ಅವರು, ಪ್ರಸ್ತುತ ಪರಿಸ್ಥಿತಿಯಲ್ಲಿ ಸಾವಯವ ಕೃಷಿ ಅಗತ್ಯವಾಗಿದ್ದು, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕು. ಇದಕ್ಕಾಗಿ ಸರ್ಕಾರ ಉತ್ಪಾದಕ ಸಂಸ್ಥೆ ಸ್ಥಾಪಿಸುವ ಮೂಲಕ ಕೃಷಿಕರಿಗೆ ಬೆಂಬಲ ನೀಡುತ್ತಿದೆ. ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ್ ಅಡಿ 10 ಕೋಟಿ ರೂ. ಮೀಸಲಿಟ್ಟಿದ್ದಾರೆ ಎಂದು ಅವರು ಹೇಳಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700