ಬೆಂಗಳೂರು: ದ್ವಿತೀಯ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನವೆಂಬರ್ 29ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಪರೀಕ್ಷೆಯನ್ನು ಆತುರದಲ್ಲಿ ನಡೆಸಲಾಗುತ್ತಿದೆ, ಯಾವುದೇ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳದೆ ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ನ ಬಿಜೆಪಿ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಪರೀಕ್ಷೆ ಮುಂದೂಡುವ ಬಗ್ಗೆ ಚರ್ಚೆಗಳಾಗಿವೆ. ಮುಂದೂಡುವ ಸಾಧ್ಯತೆಗಳಿವೆ. ಈ ಬಗ್ಗೆ ಗುರುವಾರ ಸ್ಪಷ್ಟವಾದ ನಿರ್ಧಾರ ಕೈಗೊಂಡು ಸುತ್ತೋಲೆ ಹೊರಡಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಆರ್.ಸ್ನೇಹಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700