ಹೊನ್ನಾಳಿ: ಮದುವೆ ಊಟ ಮಾಡಿದ ನೂರಾರು ಮಂದಿ ವಾಂತಿಭೇದಿ ಸಮಸ್ಯೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಹಳೇದೇವರಹೊನ್ನಾಳಿ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದಲ್ಲಿ ಶುಕ್ರವಾರ ಜರಗಿದ್ದ ಮದುವೆಯಲ್ಲಿ ಮಧ್ಯಾಹ್ನ ಊಟ ಮಾಡಿದ್ದ 500ಕ್ಕೂ ಅಧಿಕ ಜನರಲ್ಲಿ 140ಕ್ಕೂ ಹೆಚ್ಚು ಮಂದಿಗೆ ಮಧ್ಯರಾತ್ರಿ ಯಿಂದ ಆರೋಗ್ಯ ಸಮಸ್ಯೆ ಶುರುವಾಗಿದೆ.
ಅಸ್ವಸ್ಥರನ್ನು ಶನಿವಾರ ಬೆಳಗ್ಗೆ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ.
ತೀವ್ರ ಅಸ್ವಸ್ಥಗೊಂಡ ಹತ್ತು ಮಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಚಂದ್ರಪ್ಪ ತಿಳಿಸಿದರು.
ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಪೂರಿತ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಏರು ಪೇರಾಗಿರಬಹುದು ಎಂದು ಚಿಕಿತ್ಸೆ ನೀಡುತ್ತಿರುವ ಡಾ.ಕೆ. ವಿದ್ಯಾ ತಿಳಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700