ಎರಡು ವರ್ಷ ಪ್ರೀತಿ ಎಂದು ನಾಟಕವಾಡಿ, ಕೊನೆಗೂ ಮದುವೆಯಾಗುವುದಾಗಿ ಹೇಳಿ ಇನ್ನೇನು ನೋಂದಣಾಧಿಕಾರಿ ಕಚೇರಿಗೆ ಬರುವ ಮಾರ್ಗ ಮಧ್ಯದಲ್ಲೇ ಯುವಕ ನಾಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ರಾಮಾಪುರದಲ್ಲಿ ನಡೆದಿದೆ.
ಹನೂರು ತಾಲೂಕಿನ ಗ್ರಾಮವೊಂದರ 20 ವರ್ಷದ ಯುವತಿ ಮೋಸ ಹೋದಾಕೆ. ಪೊನ್ನಾಚಿ ಗ್ರಾಮದ ಪರಂಜ್ಯೋತಿ(25) ಎಂಬ ಯುವಕ ಯುವತಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ. ಇಬ್ಬರು ಪ್ರೇಮಿಗಳಾಗಿ ಎರಡು ವರ್ಷ ಕಾಲ ಕಳೆದಿದ್ದಾರೆ.ಮದುವೆಯಾಗು ಎಂದಾಗ ಮೊದಮೊದಲು ಯುವಕ ನಿರಾಕರಿಸಿದ್ದಾನೆ ಎನ್ನಲಾಗಿದೆ.
ಬಳಿಕ ನಡೆದ ಪಂಚಾಯಿತಿಯಲ್ಲಿ ಮದುವೆಯಾಗುವುದಾಗಿ ಒಪ್ಪಿ ವಿವಾಹ ನೋಂದಣಿಗಾಗಿ ರಾಮಾಪುರಕ್ಕೆ ತೆರಳುವ ಮಾರ್ಗ ಮಧ್ಯೆಯೇ ಪರಾರಿಯಾಗಿದ್ದಾನೆ. ಸದ್ಯ ಮೋಸ ಹೋದ ಯುವತಿ ರಾಮಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


