ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಂಪೇನಹಳ್ಳಿ ಗ್ರಾಮದ ಯುವಕನೋರ್ವ ಮದುವೆಯಾಗಿಲ್ಲ ಎನ್ನುವ ಬೇಸರದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನರಸಿಂಹಯ್ಯನ ಮಗ ಕಿರಣ್ ಕುಮಾರ್ (28) ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಮದುವೆಯಾಗಲು ಹೆಣ್ಣು ಸಿಗದ ಕಾರಣ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಕಷ್ಟು ಕಡೆ ಹೆಣ್ಣುಗಳನ್ನು ನೋಡಿದ್ದ ಮಾತುಕತೆಗೆ ಅಥವಾ ನಿಶ್ಚಿತಾರ್ಥದ ಹಂತಕ್ಕೆ ಬಂದು ಮದುವೆ ಮುರಿದು ಬೀಳುತ್ತಿದ್ದವು ಇದರಿಂದ ತೀವ್ರ ಕೈಸಾಲಗಳನ್ನು ಮಾಡಿಕೊಂಡು ಕುಡಿತಕ್ಕೆ ಒಳಗಾಗಿದ್ದ ಯುವಕ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜುಲೈ 25 ರ ಸೋಮವಾರ ಮಧ್ಯಾಹ್ನ ಮನೆಯಿಂದ ಹೋದವನು ಊರಿನ ಹೊರಭಾಗದ ಗುಡ್ಡೆಯಲ್ಲಿ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಕಿರಣ್ ಕುಮಾರನ ಶವ ಪತ್ತೆಯಾಗಿದೆ ವಿಷಯ ತಿಳಿದ ತಕ್ಷಣವೇ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಪಿಎಸ್ಐ ನಾಗರಾಜ್,ಪಿಎಸ್ಐ ಮಂಜುಳಾ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.
ವರದಿ: ಮಂಜುಸ್ವಾಮಿ ಎಂ ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz