ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಕರೆತಂದ ಪ್ರಿಯಕರ ತನ್ನ ಸ್ನೇಹಿತರ ಜೊತೆ ಸೇರಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಸಂಬಂಧ ಅಸ್ಸಾಂ ಮೂಲದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರೇಮಿ ತನ್ನನ್ನು ವಿವಾಹವಾಗುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ತಾನು ಬೆಂಗಳೂರಿಗೆ ಬಂದಿದ್ದಾಗಿ ಆಕೆ ಹೇಳಿದ್ದಾಳೆ. ದೊಡ್ಡನಾಗಮಂಗಲದಲ್ಲಿನ ರೂಮ್ ನಲ್ಲಿ ಆರೋಪಿ ಈ ಕೃತ್ಯ ಎಸಗಿರುವುದಾಗಿ ಸಂತ್ರಸ್ತೆ ಹೇಳಿದ್ದು, ತನ್ನ ಮೇಲೆ ಅತ್ಯಾಚಾರವೆಸಗಲು ಇನ್ನೂ ನಾಲ್ವರು ವ್ಯಕ್ತಿಗಳನ್ನು ಕಳಿಸಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


