ಕೊರಟಗೆರೆ: ಎಣ್ಣೆಯ ಏಟಿಗೆ ಯುವಕನೋರ್ವ ಮೃತಪಟ್ಟ ಘಟನೆ ತಾಲ್ಲೂಕಿನ ಕೋಳಾಲ ಹೋಬಳಿಯ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಡು ದಾರಿಯಲ್ಲಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.
ಎಲೆರಾಂಪುರ ಗ್ರಾಮದ ಯೋಗೀಶ್ ಬಿನ್ ಶಿವರಾಜ್ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಮೇ ೯ರಂದು ಸಂಜೆ ಕೆಲಸದಿಂದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಕಂಠಮಟ್ಟ ಮದ್ಯ ಸೇವಿಸಿದ್ದ ಈತ, ಮದ್ಯ ಓವರ್ ಡೋಸ್ ಆದ ಕಾರಣ ನಿಶಕ್ತನಾಗಿ ದಾರಿಯಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸಂಭವಿಸಿದ ಸ್ಥಳಕ್ಕೆ ಕೋಳಾಲ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಹಾಲಕ್ಷ್ಮಮ್ಮ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5