ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಸಿಬಿಐ ದಾಖಲಿಸಿರುವ ಮದ್ಯ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ಧಾರೆ.
ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆಯನ್ನು ಆಯೋಜಿಸಲು ನಿರ್ಧರಿಸಿದೆ. ಎಎಪಿ ನಾಯಕರು ಎಲ್ಲಾ ರಾಜ್ಯಗಳ ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆಗಳನ್ನು ಆಯೋಜಿಸುವುದಾಗಿ ಘೋಷಿಸಿದರು.
ಬಂಧನದ ನಂತರ ಎಎಪಿ ಟ್ವೀಟ್ ಮಾಡಿದ್ದು, ಇದು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ. ನಕಲಿ ಪ್ರಕರಣದಲ್ಲಿ ವಿಶ್ವದ ಅತ್ಯುತ್ತಮ ಶಿಕ್ಷಣ ಸಚಿವರನ್ನು ಸಿಬಿಐ ಬಂಧಿಸಿದ್ದು, ಇದರ ಹಿಂದೆ ಬಿಜೆಪಿಯ ರಾಜಕೀಯ ಸೇಡಿನ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದೆ.
ಮನೀಶ್ ಸಿಸೋಡಿಯಾ ಸೇರಿದಂತೆ 15 ಜನರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಸಿಸೋಡಿಯಾ ಮೊದಲ ಆರೋಪಿ. ದೆಹಲಿಯ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಮತ್ತು ಇಬ್ಬರು ಹಿರಿಯ ಅಬಕಾರಿ ಅಧಿಕಾರಿಗಳು ಸಿಸೋಡಿಯಾ ಅವರೊಂದಿಗೆ ನಿಯಮ ಉಲ್ಲಂಘಿಸಿ ಮದ್ಯದ ವ್ಯಾಪಾರಿಗಳಿಗೆ ಅಕ್ರಮವಾಗಿ ಟೆಂಡರ್‌ಗೆ ಸಹಿ ಹಾಕಿರುವುದನ್ನು ಸಿಬಿಐ ಪತ್ತೆ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


