ಪತಿ ಮೃತಪಟ್ಟ ಬೆನ್ನಲೆ, ಸೊಸೆ ಹಾಗೂ20 ದಿನದ ಮಗುವನ್ನು ಪತಿಯ ಕುಟುಂಬ ತಿರಸ್ಕರಿಸಿದ ಅಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಒಂದು ಕಡೆ ಪತಿಯನ್ನು ಕಳಕೊಂಡು, ಇನ್ನೊಂದು ಕಡೆ 20 ದಿನದ ಮಗುವನ್ನು ಕಂಕುಳಲ್ಲಿ ಇಟ್ಟುಕೊಂಡ ಆ ಮಹಿಳೆಯ ಬಗ್ಗೆ ಪತಿಯ ಮನೆಯವರು ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಬಳಿಕ ಸಮಾಜ ಸೇವಕರೊಬ್ಬರ ಕಾಳಜಿಯಿಂದ ಮಗು ಮತ್ತು ತಾಯಿಗೆ ಉಡುಪಿ ಬಳಿಯ ನಿಟ್ಟೂರಿನ ಸಖೀ ಕೇಂದ್ರದ ಆಶ್ರಯ ಕಲ್ಪಿಸಲಾಗಿದೆ.
ಉಡುಪಿಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಅವರು ಗುರುವಾರ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಅವರು ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದರು . ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಘಾತಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.
ಅಯ್ಯಪ್ಪ ಎರಡು ವರ್ಷಗಳ ಹಿಂದೆ ಗಂಗಾವತಿಯ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಇವರ ಮದುವೆಗೆ ಎರಡೂ ಕಡೆಯಿಂದಲೂ ವಿರೋಧವಿತ್ತು ಎನ್ನಲಾಗಿದೆ. ಅಯ್ಯಪ್ಪ ಅವರು ನಿಧನರಾದ ಸುದ್ದಿಯನ್ನು ಅವರ ಮನೆಯವರಿಗೆ ತಿಳಿಸಿದಾಗ ಮೃತದೇಹವನ್ನು ಸ್ವೀಕರಿಸಲು ಒಪ್ಪಿಸಿದ್ದಾರೆ. ಆದರೆ ಅಯ್ಯಪ್ಪ ಅವರ ಹೆಂಡತಿ ಮತ್ತು ಮಗುವನ್ನು ಸ್ವೀಕರಿಸಿಲು ನಿರಾಕರಿಸಿದ್ದಾರೆ.
ಇದರಿಂದ ಅಶ್ರಯ ಇಲ್ಲದೇ ಕಂಗಲಾಗಿದ್ದ ಮಹಿಳೆ ಮತ್ತು ಮಗುವನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ನಿಟ್ಟೂರಿನ ಸಖೀ ಕೇಂದ್ರದ ಆಶ್ರಯ ತಾತ್ಕಾಲಿಕ ಸಿಗುವಂತೆ ಮಾಡಿದ್ದಾರೆ.
ಹೆರಿಗೆಯಾಗಿ ಕೇವಲ 20 ದಿನಗಳಾಗಿದೆ. ಬಾಣಂತನದ ಆರೈಕೆಯಲ್ಲಿರಬೇಕಾದ ಮಹಿಳೆ ಪತಿಯನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ. ಈಕೆಯ ಔಷಧೋಪಾಚಾರ ಹಾಗೂ ಸೂಕ್ತ ಆರೈಕೆ ಬಗ್ಗೆ ಸಂಬಂಧಪಟ್ಟ ಇಲಾಖೆ ಕೂಡಲೇ ಗಮನ ಹರಿಸಬೇಕು. ಪ್ರೇಮ ವಿವಾಹವಾಗಿರುವುದರಿಂದ ಎರಡೂ ಕಡೆಯ ಕುಟುಂಬದ ಜತೆಗೆ ಮಾತುಕತೆ ನಡೆಸಿ ಅಯ್ಯಪ್ಪ ಅವರ ಹೆಂಡತಿ ಮತ್ತು ಮಗು ಬೀದಿ ಪಾಲಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy