ಬೆಂಗಳೂರು: ಮಗಳ ಮದುವೆ ವಿಚಾರದಲ್ಲಿ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಫೀಜಾ ಸುಲ್ತಾನ್ (42) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ಹಫೀಜಾ ಎರಡನೇ ಮಗಳ ಮದುವೆ ಮಾಡುವಂತೆ ಪತಿಗೆ ಒತ್ತಾಯಿಸಿದರು. ಇದೇ ವಿಚಾರವಾಗಿ ಮನಸ್ತಾಪ ಉಂಟಾಗಿತ್ತು. ಇದರಿಂದ ಬೇಸತ್ತ ಹಫೀಜಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೂಲಗಳು ತಿಳಿಸಿವೆ.


