ಮಾದಕ ವ್ಯಸನಿಯಾಗಿದ್ದ ತಂದೆ ತನ್ನ ಎಂಟು ವರ್ಷದ ಮಗಳ ತಲೆಗೆ ಹೊಡೆದು ಕೊಂದಿದ್ದಾನೆ. ಮಗಳು ಚಾಕೊಲೇಟ್ ಮತ್ತು ಆಟಿಕೆಗಳಿಗೆ ಬೇಡಿಕೆಯ ನಂತರ ಕೊಲೆ ನಡೆದಿದೆ. ಈ ಪ್ರಕರಣದಲ್ಲಿ 37 ವರ್ಷದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಈ ಭೀಕರ ಹತ್ಯೆ ನಡೆದಿದೆ.
ಶನಿವಾರ ರಾತ್ರಿ ಕೊಲೆ ನಡೆದಿದೆ. ಆರೋಪಿ ರಾಕೇಶ್ ತನ್ನ ಮಗಳನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕರೆದೊಯ್ದು ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ತಾನು ಬಡವನಾಗಿದ್ದು, ಮಗಳು ಪ್ರತಿದಿನ ಚಾಕಲೇಟ್, ಆಟಿಕೆಗಳು ಮತ್ತು ಬಟ್ಟೆಗಳನ್ನು ಕೇಳಿ ತನಗೆ ತೊಂದರೆ ನೀಡುತ್ತಿದ್ದಳು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.
ಈ ಸಮಸ್ಯೆಯಿಂದ ಪಾರಾಗಲು ಮಗಳನ್ನು ಕೊಂದಿರುವುದಾಗಿ ಆರೋಪಿಯ ಹೇಳಿಕೆಯನ್ನು ಉಲ್ಲೇಖಿಸಿ ಉಪ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೂಲಿ ಕಾರ್ಮಿಕನಾದ ಆರೋಪಿ ರಾಕೇಶ್ ಮಾದಕ ವ್ಯಸನ ಹೊಂದಿದ್ದ ಎಂದು ಅವರು ತಿಳಿಸಿದ್ದಾರೆ. ಮೂರು ವರ್ಷಗಳ ಹಿಂದೆ ಮಗುವಿನ ತಾಯಿ ಅವರನ್ನು ಬಿಟ್ಟು ಹೋಗಿದ್ದರು. ಆರೋಪಿಯ ತಾಯಿ ನಗರದ ದೇವಸ್ಥಾನದ ಬಳಿ ಭಿಕ್ಷೆ ಬೇಡುತ್ತಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


