ಮಗು ಹುಟ್ಟುವ ಮೊದಲೇ ದತ್ತು ಸ್ವೀಕಾರಕ್ಕೆ ಒಪ್ಪಂದ ಮಾಡಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹಿಂದೂ ದಂಪತಿ ಮಗುವನ್ನು ಮುಂದೆ ಸಾಕಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮುಸ್ಲಿಂ ದಂಪತಿಗೆ ದತ್ತು ನೀಡಲು ಒಪ್ಪಂದ ಮಾಡಿಕೊಂಡ ಉಡುಪಿ ಪ್ರಕರಣ ವಿಚಾರಣೆ ವೇಳೆ ‘ಗರ್ಭದಲ್ಲಿರುವ ಮಗುವಿಗೆ ತನ್ನದೇ ಬದುಕು-ಹಕ್ಕು ಇದ್ದು, ಅದು ಜನ್ಮ ತಾಳುವ ಮೊದಲೇ ದತ್ತು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಜತೆಗೆ ಮುಸ್ಲಿಂ ಧರ್ಮ ಕಾನೂನಿನಲ್ಲಿ ದತ್ತು ಸ್ವೀಕಾರಕ್ಕೆ ಮಾನ್ಯತೆಯಿಲ್ಲ’ ಎಂದು ಪೀಠ ತಿಳಿಸಿದೆ.
ಪೋಷಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy