ಕೋಲಾರ: ಒಂದೂವರೆ ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ನಡೆದಿದೆ.
ತಾಯಿ ಕೀರ್ತಿ (23), ಹಾಗೂ ಮಗಳು ಯೋಗಾಶ್ರೀ ಮೃತಪಟ್ಟವರಾಗಿದ್ದಾರೆ. ಈ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ್ದಾರೆ.
ಈ ಮಧ್ಯೆ ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಕೀರ್ತಿಯ ಪತಿ ಸುಧಾಕರ್ ಎಂಬವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5