ಪಾವಗಡ: ಪಟ್ಟಣದಲ್ಲಿ ಇಂದು ಹೆಲ್ಪ್ ಸೊಸೈಟಿ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಪಾವಗಡ ತಾಲೂಕಿನ ಶಾಲಾ ವಿದ್ಯಾರ್ಥಿಗಳು ನಾಗರಿಕರು ದೇಶಪ್ರೇಮಿಗಳೊಂದಿಗೆ ಪಾವಗಡ ಪಟ್ಟಣದ ಪ್ರಮುಖ ಬೀದಿಗಳಲ್ಲಿ 1,750 ಅಡಿಗಳ ಉದ್ದದ ಮಹಾ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಯಿತು.
ಮೆರವಣಿಗೆಯಲ್ಲಿ ಪಟ್ಟಣದ ವಿವಿಧ ಶಾಲಾ ಕಾಲೇಜುಗಳ 2,000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಮುಖಂಡರುಗಳಾದ ಡಾಕ್ಟರ್ ಜಿ. ವೆಂಕಟರಾಮಯ್ಯ, ಮಾನಂ ವೆಂಕಟಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ಸೊಗಡು ವೆಂಕಟೇಶ್, ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಸಿ ಪಿ ಐ ಶ್ರೀಕಾಂತ್ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟ ನರಸಿಂಹ, ಮುಂತಾದವರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz