nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    ಕೊರಟಗೆರೆ September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    By Ganesh TumkuruSeptember 29, 2026No Comments2 Mins Read
    kumbhabhishekha

    ಕೊರಟಗೆರೆ: ಸನಾತನ ಧರ್ಮದಲ್ಲಿ ಕುಂಭಾಭಿಷೇಕಕ್ಕೆ ತನ್ನದೇ ಆದ ಮಹತ್ವ ಇದೆ. ಶಿವನಿಗೆ ಕುಂಭಾಭಿಷೇಕ ಮಾಡಿದರೆ, ಇಡೀ ನಾಡಿಗೆ ಮಳೆ, ಬೆಳೆ ಸಮೃದ್ಧಿಯಾಗುತ್ತದೆ. ಧರ್ಮವನ್ನು ನಾವು ಉಳಿಸಿಕೊಂಡರೆ, ಧರ್ಮ ನಮ್ಮನ್ನು ಉಳಿಸುತ್ತದೆ” ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

    2ನೇ ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ಪಟ್ಟಣದ ಶ್ರೀಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಕುಂಭಾಭಿಷೇಕ ಸಮಿತಿ ವತಿಯಿಂದ ಮಳೆಗಾಗಿ ಆಯೋಜಿಸಿದ್ದ ವಿಶೇಷ ರುದ್ರಾಭಿಷೇಕ, ಮಹಾಕುಂಭಾಭಿಷೇಕ, ಹೋಮ–ಹವನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಪೂಜೆ ಸಲ್ಲಿಸಿ ಮಾತನಾಡಿದರು.

    ಮಹಾ ಕುಂಭಾಭಿಷೇಕದ ಈ ಪವಿತ್ರ ಸಂದರ್ಭದಲ್ಲಿ ನಾವೆಲ್ಲರೂ ಸೇರಿ ಮಳೆಗಾಗಿ ಪ್ರಾರ್ಥಿಸಿದರೆ, ಆ ಗಂಗಾಧರೇಶ್ವರ ಖಂಡಿತ ಒಲಿಯುತ್ತಾನೆ. ಮಳೆ ಬಾರದಿದ್ದರೆ ರೈತ ಬದುಕುವುದಿಲ್ಲ, ರೈತ ಬದುಕದಿದ್ದರೆ ದೇಶ ಬದುಕುವುದಿಲ್ಲ ಎಂದು ತಿಳಿಸಿದರು.

    ಎಲೆರಾಂಪುರ ಶ್ರೀಗಳಾದ ಡಾ.ಹನುಮಂತನಾಥ ಸ್ವಾಮೀಜಿ ಮಾತನಾಡಿ, “ದೇವಾಲಯದ ಮಹಾಕುಂಭಾಭಿಷೇಕಕ್ಕೆ ಸಾವಿರಾರು ವರ್ಷಗಳ ಪುಣ್ಯ ಬೇಕು. ಈ ಸಂದರ್ಭದಲ್ಲಿ ನಡೆಯುವ ಹೋಮ-ಹವನ, ರುದ್ರಾಭಿಷೇಕದಿಂದ ವಾತಾವರಣ ಶುದ್ಧಿಯಾಗಿ, ಮಳೆ ಬರಲು ಅನುಕೂಲವಾಗುತ್ತದೆ. ಕುಂಭಾಭಿಷೇಕದ ಜೊತೆಗೆ ಪ್ರಕೃತಿಯನ್ನು ಕಾಪಾಡುವ ಕೆಲಸವನ್ನೂ ನಾವು ಮಾಡಬೇಕು” ಎಂದು ಹೇಳಿದರು.

    ಬೆಳಗ್ಗೆಯಿಂದಲೇ ರುದ್ರಾಭಿಷೇಕ, ಕುಂಭಾಭಿಷೇಕ, ಪರ್ಜನ್ಯ ಜಪ, ಋಷ್ಯಶೃಂಗ ಜಪ, ಸೂರ್ಯ ನಮಸ್ಕಾರ, ಮಹಾರುದ್ರ ಹೋಮ, ರುದ್ರಪಠಣ, ಮಹಾಮಂಗಳಾರತಿ ಮುಗಿಯುತ್ತಿದ್ದಂತೆ ಕೊರಟಗೆರೆಯಲ್ಲಿ ದಟ್ಟ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ, ಮಳೆ ಬರುವ ಸೂಚನೆ ಕಂಡುಬಂದಿದ್ದು ಭಕ್ತರಲ್ಲಿ ಭಕ್ತಿ ಭಾವ ಇನ್ನಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ 2 ಸಾವಿರಕ್ಕೂ ಅಧಿಕ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

    ಈ ವೇಳೆ ಕೋಳಾಲ ಜಿ.ಪಂ ಮಾಜಿ ಸದಸ್ಯ ಪಿ.ಎನ್ ಕೃಷ್ಣಮೂರ್ತಿ, ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಎಂಜಿ ಜ್ಯೂವೆಲೆರ್ಸ್ ಮಾಲೀಕ ಸುಧೀರ್, ಬದ್ರಿಪ್ರಸಾದ್, ಬಿಜೆಪಿ ಅಧ್ಯಕ್ಷ ರುದ್ರೇಶ್, ಮಾಜಿ ಅಧ್ಯಕ್ಷ ಪವನ್ ಕುಮಾರ್, ಎಚ್.ಎಂ ರುದ್ರಪ್ರಸಾದ್, ಮಾಜಿ‌ ಪ.ಪಂ ಸದಸ್ಯ ಕೆ.ಆರ್ ಓಬಳರಾಜು, ಕುಂಭಾಭಿಷೇಕ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಅಶ್ವತ್ಥ ನಾರಾಯಣ್ ರಾಜು, ಚಂದ್ರಶೇಖರ್ ಅರಸ್, ಕೆ.ವಿ ಪುರುಷೋತ್ತಮ್, ಸುರೇಶ್, ರಾಘವೇಂದ್ರ, ರವಿಕುಮಾರ್, ತಿಮ್ಮರಾಜು, ಮಂಜುನಾಥ್,  ಆಟೋ ಕುಮಾರ್, ಅರ್ಚಕರಾದ ಬಾಲಾಜಿ, ದತ್ತಾತ್ರೇಯ ದೀಕ್ಷೀತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.