ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಾಘ ಪೂರ್ಣಿಮೆ ನಿಮಿತ್ತ ಇಂದು (ಬುಧವಾರ) ಪುಣ್ಯ ಸ್ನಾನ ನಡೆಯುತ್ತಿದೆ.
ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಿಂದಲ ಅವಲೋಕನ ನಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಆದಿತ್ಯನಾಥ್ ಅವರು ಲಖನೌದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿರುವ ವಾರ್ ರೂಮ್ ನಲ್ಲಿ ಬೆಳಿಗ್ಗೆ 4 ಗಂಟೆಯಿಂದ ಮಾಘಿ ಪೂರ್ಣಿಮಾ ಸ್ನಾನವನ್ನು ವೀಕ್ಷಣೆ ಮಾಡುತ್ತಿದ್ದಾರೆ.
ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ (ಗೃಹ) ಸಂಜಯ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು ಕೂಡ ವಾರ್ ರೂಮ್‌ನಲ್ಲಿ ಮುಖ್ಯಮಂತ್ರಿಗಳಿಗ ಸಾಥ್ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4