ಪ್ರಯಾಗ್ ರಾಜ್: ಜನವರಿ 13 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಶಿವರಾತ್ರಿಯ ದಿನವಾದ ಇಂದು ಅಂತಿಮ ಪುಣ್ಯ ಸ್ನಾನದೊಂದಿಗೆ ಅಂತ್ಯವಾಗಲಿದೆ.
ತ್ರಿವೇಣಿ ಸಂಗಮದಲ್ಲಿ ಇಂದು ಬೆಳಗ್ಗೆಯಿಂದಲೇ 41 ಲಕ್ಷ ಜನ ಪವಿತ್ರ ಸ್ನಾನ ಮಾಡಿದ್ದಾರೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.
ಮಹಾಕುಂಭಮೇಳದ ಕೊನೆಯ ವಿಶೇಷ ಸ್ನಾನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ, ಸಂಜೆ 6 ಗಂಟೆಯಿಂದ ಪ್ರಯಾಗ್ ರಾಜ್ ನಾದ್ಯಂತ ವಾಹನ ರಹಿತ ವಲಯವನ್ನು ಜಾರಿಗೆ ತರಲಾಗಿತ್ತು.
ಜನಸಂದಣಿಯ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಆಡಳಿತವು ಈ ನಿರ್ಬಂಧಗಳನ್ನು ವಿಧಿಸಿದೆ. ಆದರೆ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4