ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸುದ್ದಿ ವರದಿಯಾಗಿದೆ. ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ.
ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಜಿತ್ ಪವಾರ್ ಅವರಿದ್ದ ವಿಮಾನವು ರನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿವೆ. ಈ ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಅಜಿತ್ ಪವಾರ್ ಹಾಗೂ ಇತರ ಐವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ದೃಢಪಡಿಸಿದೆ.
ಮಹಾರಾಷ್ಟ್ರದ ರಾಜಕೀಯದ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಅಜಿತ್ ಪವಾರ್ ಅವರ ಅಗಲಿಕೆ ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕವನ್ನುಂಟು ಮಾಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಸೇರಿದಂತೆ ಹಲವು ಗಣ್ಯರು ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಿಜಿಸಿಎ ಈಗಾಗಲೇ ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


